ಕಳೆದ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬಾಳೆಹೊನ್ನೂರು ಶಾಖಾ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ,
ರಾಜ್ಯ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ,
ಹಿರಿಯ ಚಲನಚಿತ್ರ ನಟರಾದ ಶಂಕರ್ ಭಟ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕೇಂದ್ರ ಸರ್ಕಾರದ ಯುವಜನ ಸೇವಾ ಇಲಾಖೆಯ ನೆಹರು ಯುವ ಕೇಂದ್ರ, ಸ್ವಾನ್ ಸಾಂಸ್ಕೃತಿಕ ಅಕಾಡೆಮಿ ಹಾಗೂ ಹೆಗಡೆ ಸಾಂಸ್ಕೃತಿಕ ಸಂಸ್ಥೆ ಒಟ್ಟಾಗಿ ಕಾರ್ಯಕ್ರಮ ಆಯೋಜಿಸಿದ್ದವು.