ಜೈ ಶ್ರೀ ಗುರು ದೇವ್ ಚಿಕ್ಕಬಳ್ಳಾಪುರ ನಗರ ಹೊರಹೊಲಯದ ಎಸ್.ಜೆ.ಸಿ. ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಆಯೋಜಿಸಿರುವ *ಬೃಹತ್ ಆರೋಗ್ಯ ಮೇಳದಲ್ಲಿ* ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾದ್ಯಕ್ಷರಾದ ಪರಮಪೂಜ್ಯರಾದ ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯಾಸಾನಿದ್ಯ ವಹಿಸಿ ಆಶೀರ್ವಚನ ನೀಡಿದರು. ಈ ಸಮಾರಂಭದಲ್ಲಿ ಚಿಕ್ಕಬಳ್ಳಾಪುರ ಶಾಖಾ ಮಠದ ಪೂಜ್ಯ ಶ್ರೀ ಮಂಗಳಾನಾಥ ಸ್ವಾಮಿಜೀಯವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಶ್ರೀ ಡಾ.ಕೆ.ಸುಧಾಕರ್ ರವರು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್. ಸಂತೋಷ್ ರವರು, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪೌರಾಡಳಿತ ಹಾಗೂ ಸಣ್ಣಕೈಗಾರಿಕೆ ಸಚಿವರಾದ ಶ್ರೀ ಎನ್.ನಾಗರಾಜ್ (ಎಂ.ಟಿ.ಬಿ) ಸೇರಿದಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ರಾಜೀವ್ ಗಾಂಧಿ ವೈದ್ಯಕೀಯ ಮಹಾ ವಿದ್ಯಾಲಯದ ಅಧಿಕಾರಿಗಳು ಸೇರಿದಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಲತಾ ಆರ್ , ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.