🕯️🕯️* ಆ ಭರವಸೆಯ ಬೆಳಕು ನಿಮ್ಮದಾಗಲಿ * 🕯️🕯️🕯️🕯️🕯️🕯️

🌹ಓಂ ನಮಃ ಶಿವಾಯ 🌹
ಹಣತೆಯ ಕಥೆ….

*ಒಂದು ದಿನ ಒಂದು ಮನೆಯ ಹಣತೆಯಲ್ಲಿ ಒಂದು ಚಿಕ್ಕ ಭಿನ್ನಾಭಿಪ್ರಾಯ ಶುರುವಾಯಿತು.*
*ಹಣತೆ ” ನನ್ನಿಂದ ದೀಪ ಉರಿಯುತ್ತಿದೆ ಆ ಬೆಳಕು ನನ್ನದು ” ಎಂದು ಹೇಳಿತು.*

*ಇದನ್ನು ಕೇಳಿದ ಹಣತೆಯಲ್ಲಿದ್ದ ಎಣ್ಣೆ ” ನಾನು ಆ ದೀಪಕ್ಕೆ ಜೀವಾಳ.ನಾನೇ ಇರದಿದ್ದರೆ ದೀಪವೂ ಇಲ್ಲ,ಬೆಳಕೂ ಇಲ್ಲ ಅದಕ್ಕಾಗಿ ಆ ಬೆಳಕು ನನಗೆ ಸೇರಿದ್ದು” ಎಂದಿತು.*

*ಇದನ್ನು ಕೇಳಿದ ಬತ್ತಿ ” Hello! ನಾನು ಉರಿಯುತ್ತಿರುವದಿಂದಲೇ ದೀಪ ಉರಿಯುತ್ತಿದೆ logically ಬೆಳಕು ನನ್ನದು “ಎಂದಿತು.*

*ಈ ಕಚ್ಚಾಟವನ್ನು ಸೂಕ್ಷ್ಮದಿಂದಲೇ ನೋಡುತಿದ್ದ ಗಾಳಿ ”ನಾನು ಇಲ್ಲದೇ ದೀಪವು ಉರಿಯಲ್ಲ,ನಾನು ಹೆಚ್ಚಾದರೆ ದೀಪ ಆರಿಹೋಗುತ್ತದೆ ಆದ್ದರಿಂದ ಬೆಳಕು ನನ್ನದು” ಎಂದು ವಾದಿಸಿತು.*

*ನಾನು ನನ್ನಿಂದ ಎಂಬ ಕಚ್ಚಾಟದಲ್ಲಿ ಹಣತೆ ಹೊಡೆದು ಹೋಯಿತು.ಎಣ್ಣೆ ಹರಿದು ಹೋಯಿತು.ಬತ್ತಿಗೆ ಎಣ್ಣೆಯಿಲ್ಲದೆ ಕುಗ್ಗಿ ಹೋಯಿತು.ಗಾಳಿ ಜೋರಾಗಿ ಬೀಸಿ ಉರಿಯುತ್ತಿದ್ದ ದೀಪ ಆರಿಹೋಯಿತು !*

*ಎಲ್ಲವೂ ಒಟ್ಟಾಗಿ ಇರುತ್ತಿದ್ದರೆ ಆ ದೀಪದ ಭರವಸೆಯ ಬೆಳಕು ಎಲ್ಲರ ಪಾಲಾಗಿತ್ತು.* *”ಅಹಂ ಭಾವನೆಯಿಂದ ಅಂಧಕಾರವೇ ಹೊರತು ಬೆಳಕಿನ ಸಾನಿಧ್ಯವಿಲ್ಲ”*

*ಆ ಭರವಸೆಯ ಬೆಳಕು ನಿಮ್ಮದಾಗಲಿ*

*ನಾನು ಜೀವಮಾನದಲ್ಲಿ ಯಾರನ್ನೂ ನೋಯಿಸಿಲ್ಲ ಎನ್ನುವವನೂ ಸಹ ತನ್ನ ತಾಯಿಯನ್ನು ನೋಯಿಸಿಯೇ ಈ ಭೂಮಿಗೆ ಬಂದಿರುತ್ತಾನೆ .*…!!!
🙏🙏🙏🙏🙏🙏🙏🙏🙏

Related Posts