ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಡಿ.ವೈ. ಚಂದ್ರಚೂಡ್ ಅವರು ನೇಮಕ

ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಡಿ.ವೈ. ಚಂದ್ರಚೂಡ್ ಅವರು ನೇಮಕ

ನವದೆಹಲಿ: ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಡಿ.ವೈ. ಚಂದ್ರಚೂಡ್ ಅವರು ನೇಮಕಗೊಂಡಿದ್ದಾರೆ. ನವೆಂಬರ್ 8ರಂದು ಹಾಲಿ ಸಿಜೆಐ ಉದಯ್ ಉಮೇಶ್ ಲಲಿತ್ ಅವರು ನಿವೃತ್ತಿ ಹೊಂದಲಿದ್ದು, ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ನ್ಯಾ.ಚಂದ್ರಚೂಡ್‌ ನೇಮಕದ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಸಂವಿಧಾನದ 124ನೇ ವಿಧಿಯ ಕಲಂ (2)ರ ಅಡಿ ಅಧಿಕಾರ ಚಲಾಯಿಸಿ ನ್ಯಾಯಮೂರ್ತಿ ಡಾ. ಧನಂಜಯ ಯಶವಂತ್ ಚಂದ್ರಚೂಡ್ ಅವರನ್ನು ಸಿಜೆಐ ಆಗಿ 2022ರ ನವೆಂಬರ್ 9ರಿಂದ ಅನ್ವಯವಾಗುವಂತೆ ರಾಷ್ಟ್ರಪತಿ ಅವರು ಆದೇಶ ಮಾಡಿದ್ದಾರೆ ಎಂದು ಕಾನೂನು ಇಲಾಖೆ ಹೊರಡಿಸಿರುವ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.
ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಅವರು 2 ವರ್ಷ ಅಧಿಕಾರದಲ್ಲಿ ಇರಲಿದ್ದು, 2024ರ ನವೆಂಬರ್ 10ರಂದು ಚಂದ್ರಚೂಡ್ ನಿವೃತ್ತಿ ಹೊಂದಲಿದ್ದಾರೆ. ನ್ಯಾಯಮೂರ್ತಿ ಲಲಿತ್ 74 ದಿನಗಳ ಸಂಕ್ಷಿಪ್ತ ಅಧಿಕಾರಾವಧಿಯನ್ನು ಹೊಂದಿದ್ದರು. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಎರಡು ವರ್ಷಗಳ ಕಾಲ ಸಿಜೆಐ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಹಾಲಿ ಸಿಜೆಐ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು 65 ನೇ ವಯಸ್ಸಿನಲ್ಲಿ ಅಧಿಕಾರಾವಧಿ ಮುಕ್ತಾಯವಾದ ಒಂದು ದಿನದ ನಂತರ, ನ್ಯಾ. ಚಂದ್ರಚೂಡ್ ನವೆಂಬರ್ 9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸುಪ್ರೀಂ ಕೋರ್ಟ್‌ನ ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಡಿ.ವೈ. ಚಂದ್ರಚೂಡ್ ಅವರು ನೇಮಕ

Related Posts