ಋತುಸ್ರಾವ ಮಹಿಳೆಯರ ಬದುಕಿನ ನೈಸರ್ಗಿಕ ಭಾಗ, ಅದು ಅಂಗವಿಕಲತೆ ಅಲ್ಲ: ಕೇಂದ್ರ ಸಚಿವೆ ಸ್ಮೃತಿ ಇರಾನಿ. ವೇತನ ಸಹಿತ ಮುಟ್ಟಿನ ರಜೆ ನೀಡಬೇಕು ಎಂದು ಎಲ್ಲಿಂದಲೂ ಸರ್ಕಾರದ ಪರಿಗಣನೆಗೆ ಬಂದಿಲ್ಲ. ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವ ಯೋಜನೆಯ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ, ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.