ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ರಾಣಿ ಚೆನ್ನಮ್ಮ, ರಾಯಣ್ಣ, ಬಸವಣ್ಣ, ಕುವೆಂಪು ಹೆಸರು

ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಧಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲು ಅಸ್ತು

ಬೆಳಗಾವಿ: ವಿಧಾನಸಭೆಯಲ್ಲಿ ರಾಜ್ಯದ ನಾಲ್ಕು ಏರ್‌ಪೋರ್ಟ್‌ಗಳಿಗೆ ನಾಮಕರಣ ಮಾಡುವ ನಿರ್ಣಯ ಅಂಗೀಕಾರ ಪಡೆದುಕೊಳ್ಳಲಾಯಿತು. ಈ ಸಂಬಂಧ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವ ಎಂ.ಬಿ ಪಾಟೀಲ್‌, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯ ಮಂಡಿಸಿದರು. ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಹೆಸರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹುಬ್ಬಳ್ಳಿ ವಿಮಾನ ನಿಲ್ದಾಣಕೆ . ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರಿಡುವ ನಿರ್ಣಯವನ್ನು ಅಂಗೀಕರಿಸಲಾಯಿತು.

<

Related Posts