ಪ್ರವಾಸದ ವೇಳೆ ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಅಸಭ್ಯ ವರ್ತನೆ :
ಮುಖ್ಯ ಶಿಕ್ಷಕಿ ಅಮಾನತು ಚಿಕ್ಕಬಳ್ಳಾಪುರ: ಶಾಲಾ ಶೈಕ್ಷಣಿಕ ಅಧ್ಯಯನ ಪ್ರವಾಸದ ವೇಳೆ ಮುಖ್ಯ ಶಿಕ್ಷಕಿಯೊಬ್ಬರು ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಮುರಗಮಲ್ಲ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅಸಭ್ಯವಾಗಿ ವರ್ತಿಸಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ.
ಪ್ರವಾಸದ ಸಂದರ್ಭದಲ್ಲಿ ವಿವಿಧ ಭಂಗಿಗಳಲ್ಲಿ ಬಾಲಕನೊಂದಿಗೆ ಶಿಕ್ಷಕಿ ಫೋಟೋ ತೆಗೆಸಿಕೊಂಡಿದ್ದಾರೆ. ವಿದ್ಯಾರ್ಥಿಯೂ ಕೂಡ ಶಿಕ್ಷಕಿಯನ್ನು ಮುದ್ದಾಡಿದ್ದಾನೆ.
ಘಟನೆಯ ಕುರಿತು ಶಾಲೆಯ ಆಡಳಿತ ಮಂಡಳಿಯವರು ಹಾಗೂ ಪೋಷಕರು ಆಕ್ರೋಶ ವ್ಯಕ್ತಪಡಿಸಿ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದಿದ್ದು, ಪರಿಶೀಲನೆ ನಡೆಸಿ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.