Namma Metro: ಬೆಂಗಳೂರಿನ ಹೊರವಲಯದ ನಾಲ್ಕು ಪಟ್ಟಣಗಳಿಗೆ ನಮ್ಮ ಮೆಟ್ರೋ ಸಂಪರ್ಕ ಕಲ್ಪಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಶಾಸಕರ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿದೆ.

ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ ಮತ್ತು ಹೊಸಕೋಟೆ ಪಟ್ಟಣಗಳಿಗೆ ನಮ್ಮ ಮೆಟ್ರೋವನ್ನು ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ.

ಬೆಂಗಳೂರ್ ಗ್ರಾಮಾಂತರ ಮತ್ತು ಬೆಂಗಳೂರು ನಗರ ಪ್ರದೇಶದಲ್ಲಿ ಕೆಲವು ಹಂತಗಳಲ್ಲಿ ನಡೆಯುತ್ತಿರುವ ಮೆಟ್ರೋ ಯೋಜನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಬೆಂಗಳೂರಿನ ಉಪನಗರಗಳಿಗೆ ಸಂಪರ್ಕ ಕಲ್ಪಿಸಲಿದೆ ಎಂದು ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರಿಗೆ ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ನಾಲ್ಕು ಸೆಟಲೈಟ್‌ ಟೌನ್‌ಗಳನ್ನು ನಿರ್ಮಿಸಲು ಕರ್ನಾಟಕ ಸರ್ಕಾರ ಯೋಜಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Related Posts