ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ

ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು ರೂ. 2 ಕೋಟಿ ಬೆಲೆಯ ಮಾಲು ಪತ್ತೆಯಾಗಿದೆ.

ನಕಲಿ ತಯಾರಿಕೆ ಆರೋಪದ ಮೇಲೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ. ಮಾಲಕಪೇಟೆ ಪೊಲೀಸರಿಗೆ ದೂರು ನೀಡಿದ್ದು ತನಿಖೆ ನಡೆದಿದೆ.

ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಕೆಎಸ್‌ಡಿಎಲ್ ಅಧ್ಯಕ್ಷರೂ ಆದ ಸಚಿವ ಎಂ.ಬಿ ಪಾಟೀಲ್ ಅವರಿಗೆ‌ ಅನಾಮಧೇಯ ಕರೆ ಬಂದಿತ್ತು. ಬಳಿಕ ಸಚಿವರು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಅವರಿಗೆ ನಿಗಾ ವಹಿಸಲು ಸೂಚಿಸಿದ್ದರು. ಅದರಂತೆ, ಸಿಕಂದರಾಬಾದಿನಲ್ಲಿರುವ ಸಂಸ್ಥೆಯ ಅಧಿಕೃತ ಮಾರಾಟ ಕಚೇರಿಯ ಸಿಬ್ಬಂದಿ ತಮಗೆ ಸಿಕ್ಕ ಸುಳಿವಿನ ಜಾಡು ಹಿಡಿದು ಕಾರ್ಯಪ್ರವೃತ್ತರಾಗಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟವಾಗುತ್ತಿರುವುದು ಕಂಡುಬಂದಿತ್ತು. ಆದರೆ, ಅದನ್ನು ಯಾರು ಪೂರೈಸುತ್ತಿದ್ದಾರೆ ಎಂಬ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಆಗ ಕೆಎಸ್‌ಡಿಎಲ್ ಸಿಬ್ಬಂದಿ ಸ್ವತಃ ಒಂದು ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ, ಅದರ ಮೂಲ ಪತ್ತೆಗೆ ಕಾರ್ಯಪವೃತ್ತರಾದರು.‌

Related Posts