ರಾಜ್ಯಾದ್ಯಾಂತ ಬೃಹತ್‌ ಪ್ರತಿಭಟನೆ

ರಾಜ್ಯಾದ್ಯಾಂತ ಬೃಹತ್‌ ಪ್ರತಿಭಟನೆ

ಸುಪ್ರೀಂ ಕೋರ್ಟ್ ತೀರ್ಪಿನಂತೆ ರಾಜ್ಯ ಸರ್ಕಾರ ಪರಿಶಿಷ್ಟರ ಮೀಸಲಾತಿಯಲ್ಲಿ ಒಳಮೀಸಲಾತಿ ಅನುಷ್ಠಾನಗೊಳಿಸಲು ದ.ಸಂ.ಸ ಆಗ್ರಹಿಸಿದೆ. ಪರಿಶಿಷ್ಟರ ಮಿಸಲಾತಿ ವರ್ಗೀಕರಣ ಜರೂರಾಗಿ ಜಾರಿ ಮಾಡಲು ರಾಜ್ಯಾದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ದಿನಾಂಕ : 09-09-2024ರಂದು ಜಿಲ್ಲಾಧಿಕಾರಿಗಳ ಕಛೇರಿಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು.

ಪರಿಶಿಷ್ಟರ ಮೀಸಲಾತಿ ಪರಿಶಿಷ್ಟ ಜನಾಂಗದ 101 ಜಾತಿಗಳಲ್ಲಿ ಸಮನಾಗಿ ಹಂಚಿಕೆಯಾಗಿಲ್ಲ ಎಂಬ ಆತಂಕ ಹಾಗೂ ಅಸಹನೆಯಿಂದ 30 ದಶಕಗಳಿಂದ ರಾಜ್ಯಾದ್ಯಾಂತ ನಿರಂತರವಾಗಿ ಹೋರಾಟಗಳು ನಡೆಯುತ್ತಿದೆ. ಹೋರಾಟದಲ್ಲಿ ಹಲವಾರು ಹೋರಾಟಗಾರರು ಜೀವ, ಜೀವನ ಹಾಗೂ ಬದುಕನ್ನೇ ಕಳೆದುಕೊಂಡಿದ್ದಾರೆ.

ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಮಾಡಲು ಕರ್ನಾಟಕ, ಆಂದ್ರ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ನಡೆದ ಹೋರಾಟಗಳ ಹಿನ್ನಲೆಯಲ್ಲಿ ಹತ್ತಾರು ರಾಜ್ಯ ಸರ್ಕಾರಗಳು ರಚಿಸಿದ ಹಲವಾರು ಆಯೋಗಗಳು ನೀಡಿದ ವರದಿಗಳನ್ನು ಪರಿಶೀಲಿಸಿದ ಸುಪ್ರೀಂ ಕೋರ್ಟಿನ 7 ನ್ಯಾಯಾದೀಶರ ಸಂವಿಧಾನ ಪೀಠg ದಿನಾಂಕ: 1-08-2024 ರಂದು ಐತಿಹಾಸಿಕ ತೀರ್ಪು ನೀಡಿ ಈ ವಿವಾದಕ್ಕೆ ತೆರೆ ಎಳಿದಿದೆ.

ಸುಪ್ರೀಂಕೋರ್ಟ್ ಪರಿಶಿಷ್ಟರ ಮೀಸಲಾತಿ ವರ್ಗೀಕರಣ ರಾಜ್ಯಕ್ಕೆ ಸಂವಿಧಾನ ದತ್ತ ಅಧಿಕಾರವಿದೆ. ಎಂದು ತೀರ್ಪಿನಲ್ಲಿ ತಿಳಿಸಿದೆ. ಅಲ್ಲದೆ ಈ ಹಿಂದೆ ಕರ್ನಾಟಕ ಮುಖ್ಯಮಂತ್ರಿಗಳಾಗಿದ್ದ ಮಾನ್ಯ ಬಸವರಾಜ ಬೊಮ್ಮಾಯಿ ರವರ ನೇತೃತ್ವದಲ್ಲಿ “ಸಚಿವ ಸಂಪುಟ ಸಭೆ” ತೀರ್ಮಾನಿಸಿದಂತೆ ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಮಾಡಲು ದಿ: 31-03-2023 ರಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.

ಇತ್ತೀಚೆಗೆ ಸರ್ಕಾರವು ಮುಖ್ಯಮಂತ್ರಿಗಳಾದ ಮಾನ್ಯಶ್ರೀ ಸಿದ್ದರಾಮಯ್ಯರವರ ನೇತೃತ್ವದಲ್ಲಿ ಸಹ “ಸಚಿವ ಸಂಪುಟ”ದ ಸಭೆಯ ತೀರ್ಮಾನದಂತೆ ದಿನಾಂಕ: 17-01-2024 ರಂದು ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಮೀಸಲಾತಿಯ ವರ್ಗೀರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.

ಇದೀಗ ಸುಪ್ರೀಂ ಕೋರ್ಟ್‌ನ 7 ನ್ಯಾಯಾದೀಶರ ಪೀಠವು ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಸಂವಿಧಾನದತ್ತ ಅಧಿಕಾರವಿದೆ ಎಂದು ತೀರ್ಪು ನೀಡಿದೆ. ಆದರೆ ತೀರ್ಪು ಬಂದು 19 ದಿನ ಕಳೆದರು ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಸಿದ್ದರಾಮಯ್ಯನವರ ಸರ್ಕಾರ ದಿವ್ಯ ನಿರ್ಲಕ್ಷ್ಯ ತಾಳಿ ಅನುಷ್ಠಾನಗೊಳಿಸಲು ಮೀನಾ ಮೇಷ ಮಾಡುತ್ತಿದೆ.

ಆದ್ದರಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ದಿನಾಂಕ 09-09-2024 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಛೇರಿಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿ ಮಾನ್ಯ ಶ್ರೀ ಸಿದ್ದರಾಮಯ್ಯ ರವರಿಗೆ ಮನವಿ ರವಾನಿಸಲಾಗುವುದು.

ಬೆಂಗಳೂರಿನಲ್ಲಿ ಸಹ ಇದೇ ದಿನಾಂಕ : 09-09-2024 ರಂದು ಪ್ರೀಡಂ ಪಾರ್ಕ್‌ನಿಂದ ಮುಖ್ಯಮಂತ್ರಿಗಳವರ ನಿವಾಸಕ್ಕೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ ಮನವಿ ಸಲ್ಲಿಸಲಾಗುವುದು. ಕೂಡಲೇ ಮುಖ್ಯಮಂತಿಗಳು “ಸಚಿವ ಸಂಪುಟ ಸಭೆ” ನಡೆಸಿ ನ್ಯಾಯಮೂರ್ತಿ ಎ.ಜೆ. ಸದಾಶಿವ ರವರ ಆಯೋಗದ ವರದಿಯಂತೆ ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಅನುಷ್ಠಾನ ಮಾಡಲು ಆಗ್ರಹಿಸಿದೆ. ವಿಳಂಬ ಮಾಡಿದ್ದಲ್ಲಿ ಮುಂಬರುವ ವಿಧಾನಸಭಾ ಉಪ ಚುನಾವಣೆಯಲ್ಲಿ ಬಹುಜನರು ಚುನಾವಣೆಯನ್ನೇ ಬಹಿಷ್ಕಾರಿಸಲಾಗುವುದಾಗಿ ಎಚ್ಚರಿಕೆ ನೀಡಿದೆ.

ಮೂಲ ಸಂವಿಧಾನದ ಅನುಚ್ಛೇದ 15(4) ಮತ್ತು 16(4) ರಂತೆ ಅನುಸೂಚಿತ ಜಾತಿ ಅನುಸೂಚಿತ ಪಂಗಡಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಕೊಡಮಾಡಿದ ಮೀಸಲಾತಿಯು ಮೂಲಭೂತ ಹಕ್ಕಾಗಿದ್ದು, ಕೆನೆ ಪದರಕ್ಕೆ ಅವಕಾಶವೇ ಇಲ್ಲ. ಸಂವಿಧಾನದ ವಿಧಿ 15(4) ಮತ್ತು 16 (4) “ಸಮಕಾಲೀಕ ಪಟ್ಟಿ” (Concurrent List of Subject) ಅಡಿಯಲ್ಲಿ ಬರುತ್ತದೆ. ಹಾಗಾಗಿ ಕೇಂದ್ರ ಅಳವಡಿಸಿಕೊಂಡ ನೀತಿಗಳನ್ನೇ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅನ್ವಯಿಸುತ್ತದೆ. ಹೀಗಾಗಿ ಈಗಾಗಲೇ ಸುಪ್ರೀಂಕೋರ್ಟಿನ ಆದೇಶವನ್ನು ಸ್ವಾಗತಿಸಿದ ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗಗಳಿಗೆ ಕೆನೆ ಪದರ ಮೀಸಲಾತಿ ಅಳವಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಕರ್ನಾಟಕ ರಾಜ್ಯ ಸರ್ಕಾರ ಯಾವುದೇ ಮೀನಾಮೇಷ ಎಣಿಸದೆ ಯಾವುದೇ ವಿಳಂಬ ನೀತಿ ಅನುಸರಿಸದೇ ಈ ಕೂಡಲೇ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಅನುಷ್ಠಾನಗೊಳಿಸಲು ದ.ಸಂ.ಸ.

ಆಗ್ರಹಿಸಿದೆ.

ಹಕ್ಕೊತ್ತಾಯಗಳು

ಸುಪ್ರೀಂ ಕೋರ್ಟ್ 7 ನ್ಯಾಯಾಧೀಶರ ತೀರ್ಪಿನಂತೆ ಪರಿಶಿಷ್ಟರ ಮೀಸಲಾತಿಯಲ್ಲಿ ಒಳ ಮೀಸಲಾತಿ ಅನುಷ್ಠಾನ ಮಾಡಬೇಕು.

2023-24 ಮತ್ತು 2024-25 ನೇ ಸಾಲಿನಲ್ಲಿ 25391 ಕೋಟಿ ಪರಿಶಿಷ್ಠ ಜಾತಿ / ಪರಿಶಿಷ್ಟ ವರ್ಗದ SCSP/TSP ಅಭಿವೃದ್ಧಿಯ ಹಣ ದುರ್ಬಳಕೆ ಮಾಡಿಕೊಂಡಿರುವ ರಾಜ್ಯ ಸರ್ಕಾರ ಈ ಹಣವನ್ನು ಈ ಸಮಾಜದ ಅಭಿವೃದ್ಧಿಗೆ ವಾಪಸ್ ನೀಡಲಿ.

ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಸ್ಥಗಿತ ಮಾಡಲಾಗಿದೆ. ಹಾಗೂ ಮೆರಿಟ್ ವಿದ್ಯಾರ್ಥಿ ವೇತನ ಮತ್ತು ವಿದೇಶ ವ್ಯಾಸಂಗದ ಪ್ರಬುದ್ಧ ಯೋಜನೆ ರದ್ದು

ಮಾಡಿದೆ ಪುನಃ ಆರಂಭಿಸಲಿ.

ಪರಿಶಿಷ್ಟರ ಮೀಸಲಾತಿ ವರ್ಗೀಕರಣವಾಗುವವರೆಗೂ ಸರ್ಕಾರ ಎಲ್ಲಾ ಸರ್ಕಾರ ನೇಮಕ ಮಾಡಲಿರುವ ಹುದ್ದೆಗಳ ನೇಮಕಾತಿಗಳನ್ನು ಸ್ಥಗಿತಗೊಳಿಸಬೇಕೆಂದು ಡಾ ಏನ್ ಮೂರ್ತಿ. ರಾಷ್ಟ್ರೀಯ ಅಧ್ಯಕ್ಷರು
ಕರ್ನಾಟಕ ದಲಿತ ಸಂಘರ್ಷ ಸಮಿತಿ.

Related Posts