ಡಾ ವಿನಯಕುಮಾರ್ ಎಸ್
*ಬೆಳಗಾವಿ: ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಮುಸ್ಲಿಂ ಜಿಲ್ಲಾಧಿಕಾರಿ*
******************************
ಬೆಳಗಾವಿ: ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ ಜೋರಾಗಿದ್ದು, ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಡಿಸಿ ಮೊಹಮ್ಮದ್ ರೋಷನ್ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಶನಿವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಪರಿಸರ ಸ್ನೇಹಿಯಾದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದರು. ಇದಕ್ಕೂ ಮೊದಲು ಅವರು ಗಣೇಶ ಮೂರ್ತಿಗೆ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಪ್ರತಿ ವರ್ಷವೂ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಲಾಗುತ್ತದೆ. ಈ ಬಾರಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪತ್ನಿ ಅಂಕಿತಾ, ಪುತ್ರ ಹಾಗೂ ಕಚೇರಿಯ ಸಿಬ್ಬಂದಿಗಳ ಜೊತೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಕಛೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.
ಜುಲೈ ತಿಂಗಳಿನಲ್ಲಿ ಮೊಹಮ್ಮದ್ ರೋಷನ್ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡಿದ್ದಾರೆ.
2015ನೇ ಬ್ಯಾಚ್ ಐಎಎಸ್ ಅಧಿಕಾರಿ ಮೊಹಮ್ಮದ್ ರೋಷನ್ ಮೊದಲು ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.