ಸಂಜೀವ ಖನ್ನಾ 51ನೆಯ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಯಾಗಿ ಆರು ತಿಂಗಳ ಕಾಲ ಅಧಿಕಾರಾವಧಿಗೆ ಆಯ್ಕೆಯಾಗಿದ್ದಾರೆ.
ನವದೆಹಲಿ: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನಂಜೀವ್ ಖನ್ನಾ ಹೆಸರನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಹಾಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಶಿಫಾರಸು ಮಾಡಿದ್ದಾರೆ.
ಸಿಜೆಐ ಚಂದ್ರಚೂಡ್ ಅವರು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ
ಶಿಫಾರಸು ಮಾಡಿದ್ದಾರೆ. ನವೆಂಬರ್ 10 ರಂದು 51 ನೇ ಸಿಜೆಐ ನ್ಯಾ, ಸಂಜೀವ್
ಖನ್ನಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಮತ್ತು ಆರು ತಿಂಗಳ ಕಾಲ ಸೇವೆ ಸಲ್ಲಿಸಲಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ ನ್ಯಾ. ಸಂಜೀವ್ ಖನ್ನಾ ಅವರು ಚುನಾವಣಾ ಬಾಂಡ್ ಯೋಜನೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿ ರದ್ದತಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ ಜಮೀನು ಸೇರಿದಂತೆ ಹಲವು ಪ್ರಮುಖ ಪ್ರಕರಣಗಳ ವಿಚಾರಣೆಗೆ ರಚಿತವಾಗಿದ್ದ ಸಂವಿಧಾನ ಪೀಠದ ಭಾಗವಾಗಿದ್ದರು. 1960ರ ಮೇ 14ರಂದು ಕಾನೂನು ಹಿನ್ನೆಲೆಯ ಕುಟುಂಬದಲ್ಲಿ ಜನಿಸಿದ ನ್ಯಾ. ಸಂಜೀವ ಖನ್ನಾ, ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ದೇವರಾಜ್ ಖನ್ನಾ ಅವರ ಪುತ್ರ ಮತ್ತು ಹಿರಿಯ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿದ್ದ ಹಂಸರಾಜ್ ಖನ್ನಾ ಅವರ ಸೋದರಳಿಯರಾಗಿದ್ದಾರೆ.
ದೆಹಲಿಯ ಬಾರಖಂಬಾ ರಸ್ತೆಯ ಮಾಡರ್ನ್ ಸ್ಕೂಲ್‌ನಲ್ಲಿ ಶಾಲಾ ಶಿಕ್ಷಣ ಪೂರ್ಣಗೊಳಿಸಿದ ನ್ಯಾ. ಸಂಜೀವ ಖನ್ನಾ, 1980ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಪದವಿ ಪೂರ್ಣಗೊಳಿಸಿದರು. ನಂತರ ದೆಹಲಿ ವಿವಿ ಕ್ಯಾಂಪಸ್ ಕಾನೂನು ಕೇಂದ್ರದಿಂದ ಕಾನೂನು ಪದವಿಯನ್ನು ಪಡೆದರು. ದೆಹಲಿ ಹೈಕೋರ್ಟ್‌ನಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಮತ್ತು ಅಮಿಕಸ್ ಕ್ಯೂರಿಯಾಗಿ ಸೇವೆ ಸಲ್ಲಿಸಿದ್ದ ನ್ಯಾ. ಸಂಜೀವ ಖನ್ನಾ, 2005ರಲ್ಲಿ, ದೆಹಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಬಡ್ತಿ ಪಡೆದರು ಮತ್ತು 2006ರಲ್ಲಿ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.
*
