ಕರ್ನಾಟಕ ಸರಕಾರದ ಇಂದನ ಇಲಾಖೆಯಲ್ಲಿ ಪ್ರಾಣಪಾಯದಲ್ಲಿ ಕೆಲಸಮಾಡುತ್ತಿರುವ ಹೊರಗುತ್ತಿಗೆ ನೌಕರಿಗೆ ಸೇವಾ ಭದ್ರತೆ ನೀಡಲು ಒತ್ತಾಯಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ.
ಕರ್ನಾಟಕ ರಾಜ್ಯ ಕೆ.ಪಿ.ಟಿ.ಸಿ.ಎಲ್. ಮತ್ತು ಎಸ್ಕಾಂಸ್ ಹೊರ ಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆ ಪ್ರದಾನ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಇಂಧನ ಇಲಾಖೆಯಲ್ಲಿ ಪ್ರಾಣಾಪಾಯದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸೇವಾ ಭದ್ರತೆಗೆ ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ರಾಜ್ಯದಲ್ಲಿರುವ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸ್ಥಗಿತಗೊಳಿಸಿ ಹೊರ ಗುತ್ತಿಗೆ ನೌಕರರು ತಮ್ಮ ಕುಟುಂಬದೊಂದಿಗೆ ಬೃಹತ್ ಪ್ರತಿಭಟನೆ ಮಾಡುವ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದರು. ಅವರು 1). ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಮಾಡಬೇಕು.
2) ಕೆಲಸದಿಂದ ತೆಗೆದು ಹಾಕಿರುವ ನೌಕರರನ್ನು ಮರು ನೇಮಕ ಮಾಡಬೇಕೆಂದು ಒತ್ತಾಯಿಸಿದರು.
ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ 2023 ಆಗಸ್ಟ್ ತಿಂಗಳಿನಲ್ಲಿ ಸತತ ಐದು ದಿನಗಳ ಕಾಲ ಬೆಂಗಳೂರಿನ ಫ್ರೀಡಂ ಪಾರ್ಕ್ ‘ನಲ್ಲಿ ಪ್ರತಿಭಟನೆ ಮಾಡಿ ಸರ್ಕಾರದ ಗಮನಸೆಳೆದು ಮಾನ್ಯ ಇಂಧನ ಸಚಿವರಿಗೆ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ನೀಡಿದ್ದೆವು. ನಮ್ಮ ಮನವಿಗೆ ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಹಂತ ส่งสลาก ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತೇವೆಂದು ಹೇಳಿ ನಮ್ಮ ಹೋರಾಟವನ್ನು ಹಿಂಪಡೆಯಲು ಮನವೊಲಿಸಿದ್ದರು. ಅದರಂತೆ ನಾವು ಒಂದು ವರ್ಷ ನಾಲ್ಕು ತಿಂಗಳು ಕಾಲ ಕಾಯ್ದರೂ ನಮ್ಮ ಯಾವುದೇ ಬೇಡಿಕೆಗಳನ್ನು ಈಡೇರಿಸದ ಸರ್ಕಾರ ಮತ್ತು ಇಂಧನ ಇಲಾಖೆಯ ವಿರುದ್ಧ ಪ್ರಾಣಪಾಯದಲ್ಲಿ ಕೆಲಸ ಮಾಡುತ್ತಿರುವ ಸ್ಪೇಷನ್ ಆಪರೇಟರ್ಸ್, ಸ್ಟೇಷನ್ ಹೆಲ್ಸರ್ಸ್, ಗ್ಯಾಂಗ್ ಮ್ಯಾನ್, ಮೀಟರ್ ರೀಡರ್ಸ್ ಮತ್ತು ಚಾಲಕರು ಹಾಗು ಮತ್ತಿತರರ ಹೊರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಿ ಎಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ದಿನಾಂಕ: 28/01/2025 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಕರ್ನಾಟಕ ರಾಜ್ಯ ಕೆಪಿಟಿಸಿಎಲ್ ಮತ್ತು ಎಸ್ಕಾಂ ಗುತ್ತಿಗೆ ನೌಕರ ಹಿತರಕ್ಷಣಾ ವೇದಿಕೆ ಹಾಗು ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ಚಾಲಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಪದಾಧಿಕಾರಿಗಳು ಸಭೆಯಲ್ಲಿ ನಿರ್ಣಯ ಕೈಗೊಂಡಿರುತ್ತೇವೆಂದು ತಿಳಿಸಿದ್ದಾರೆ. ಈ ಪ್ರತಿಭಟನೆಗೆ ಅವಕಾಶ ಮಾಡಿಕೊಡದೆ ಸರ್ಕಾರ ಮತ್ತು ಇಂದನ ಇಲಾಖೆ ಇದೇ ತಿಂಗಳು 27 ರ ಒಳಗೆ, ಹಾಕಿರುವ ಹೊರ ಗುತ್ತಿಗೆ ನೌಕರರನ್ನು ಮರು ನೇಮಕ ಮಾಡಬೇಕು ಎಂದು
ಮಾಧ್ಯಮಗಳ ಮುಖೇನವಾಗಿ ಸರ್ಕಾರವನ್ನು ವಿನಂತಿಸುತ್ತೇವೆಂದರು. ಒಂದು ವೇಳೆ ಗಡುವು ನೀಡಿರುವ ದಿನಾಂಕದ ಒಳಗೆ ಸರ್ಕಾರ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳದಿದ್ದರೆ ಪ್ರತಿಭಟನೆಗೆ ನಿಗದಿ ಮಾಡಿರುವ ದಿನಾಂಕದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ನೌಕರರು ರಾಜ್ಯದ ಎಲ್ಲಾ ವಿಧ್ಯುತ್ ಉಪ ಕೇಂದ್ರಗಳನ್ನು ಸ್ಥಗಿತಗೊಳಿಸಿ ತಮ್ಮ ಕುಟುಂಬ ಸಮೇತವಾಗಿ ಪ್ರತಿಭಟನೆಗೆ ಮುಂದಾಗುತ್ತೇವೆಂದು ಆಕ್ರೋಶ ವ್ಯಕ್ತ ಪಡಿಸಿದರು. ಈ ಪತ್ರಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕೆಪಿಟಿಸಿಎಲ್ ಮತ್ತು ಎಸ್ಕಾಂ ಗುತ್ತಿಗೆ ನೌಕರರ ಹಿತರಕ್ಷಣಾ ವೇದಿಕೆ ರಾಜ್ಯ ಗೌರವಾಧ್ಯಕ್ಷರಾದ ಮೇಲುಕೋಟೆ ಬೆಟ್ಟಸ್ವಾಮಿ ಗೌಡ, ರಾಜ್ಯಾಧ್ಯಕ್ಷರಾದ ಲೀಲಾಸಾಗರ್ ಎಂ ಎಸ್, ರಾಜ್ಯ ಉಪಾಧ್ಯಕ್ಷರಾದ ಪರಶುರಾಮ್ ರಾಥೋಡ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಾಗಪ್ಪ ಭಾವಿಕಟ್ಟಿ, ರಾಘವೇಂದ್ರ ಉರಣಕರ್, ಮಂಜುನಾಥ್ ಹಾದಿಮುನಿ, ಜಿನೇಂದ್ರ ಕುಮಾರ್ ಬಿ ಪಿ, ಅರ್ಜುನ್ ಗಾಣಿಗೇರ, ಮನೋಹರ್ ಸಿ ಹೆಚ್, ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಮಲ್ಲೇಶ್ ಬಿ ಜಿ ಹಾಗು ರಾಜ್ಯ ಕಮಿಟಿ ಮತ್ತು ಜಿಲ್ಲಾ ಕಮಿಟಿ ಪದಾದಿಕಾರಿಗಳು ಉಪಸ್ಥಿತರಿದ್ದರು.