ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ
: ಜ. 20: ‘ಸಾರ್ವಜನಿಕ ಸ್ಥಳದಲ್ಲಿ ಯಾರಾದರೂ ನಿಮಗೆ ಸಮಸ್ಯೆ, ಉಪಟಳ, ಕಿರಿಕಿರಿ ಉಂಟು ಮಾಡಿದರೆ ಕೂಡಲೇ 112 ಸಂಖ್ಯೆಯ ಸಹಾಯವಾಣಿ ಅಥವಾ ಚೆನ್ನಮ್ಮ ಪಡೆಗೆ ಕರೆ ಮಾಡಿ ಮಾಹಿತಿ ನೀಡಿ. ತೊಂದರೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಮಹಿಳೆಯರ ರಕ್ಷಣೆಗೆಂದೆ ಜಿಲ್ಲಾ ಪೊಲೀಸ್ ಇಲಾಖೆ ಅಸ್ತಿತ್ವಕ್ಕೆ ತಂದಿರುವ ‘ಚನ್ನಮ್ಮ ಪಡೆ’ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಗ್ರಾಮಾಂತರ ಠಾಣೆ ಸಬ್ ಇನ್ಸ್’ಪೆಕ್ಟರ್ (ಪಿಎಸ್ಐ) ಸ್ವಪ್ನ ಅವರು ಮಹಿಳೆಯರಿಗೆ ತಿಳಿಸಿದ್ದಾರೆ
ಶಿವಮೊಗ್ಗ ನಗರದ ಕೆಎಸ್ಆರ್’ಟಿಸಿ ಬಸ್ ನಿಲ್ದಾಣ ಕಟ್ಟಡದಲ್ಲಿರುವ ವ್ಯಾಪಾರಿ ಮಳಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ, ಪೊಲೀಸ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಸುರಕ್ಷತೆಯ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ ಸಾಮಾಜಿಕ ಜಾಲತಾಣ ನಿರ್ವಹಣೆ ವೇಳೆ, ಮಹಿಳೆಯರು ಸಾಕಷ್ಟು ಎಚ್ಚರಿಕೆವಹಿಸಬೇಕು. ಆನ್ ಲೈನ್ ನಲ್ಲಿ ಚಾಟಿಂಗ್ ಸೇರಿದಂತೆ ಜಾಲತಾಣಗಳ ಬಳಕೆ ವೇಳೆ ಜಾಗರೂಕರಾಗಿರಬೇಕು.
ನಿಮ್ಮ ಖಾಸಗಿ ಮಾಹಿತಿ, ಫೋಟೋಗಳನ್ನು ಹಂಚಿಕೊಳ್ಳಬೇಡಿ. ಇವುಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದು ಕಿವಿಮಾತು ಹೇಳಿದ್ದಾರೆ.