
ಬೆಂಗಳೂರು: ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಮೂರು ಜಾಗಗಳನ್ನು ಪ್ರಸ್ತಾಪಿಸಲಾಗಿದ್ದು, ಅನುಮೋದನೆಗಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮೂಲಸೌಕರ್ಯ ಸಚಿವ ಎಂ.ಬಿ. ಪಾಟೀಲ್ ಶುಕ್ರವಾರ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಎಂಬಿ ಪಾಟೀಲ್, ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಕೇಂದ್ರಕ್ಕೆ ಪ್ರಸ್ತಾಪಿಸಲಾಗಿದೆ. ಕನಕಪುರ ರಸ್ತೆ ಹಾರೋಹಳ್ಳಿ ಬಳಿ ಎರಡು ಕಡೆ ಹಾಗೂ ನೆಲಮಂಗಲದ ಕುಣಿಗಲ್ ರಸ್ತೆಯ ಒಂದು ಕಡೆ ಸ್ಥಳ ಗುರುತಿಸಲಾಗಿದ್ದು, ಅನುಮೋದನೆಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.
ಇದು ಕರ್ನಾಟಕದ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಅವರು ಹೇಳಿದ್ದಾರೆ.