Skip to content
ಕನ್ನಡ ಜಾನಪದ ಪರಿಷತ್ತು ಶಾಂತಿನಗರ ವಿಧಾನಸಭಾ ಕ್ಷೇತ್ರ ಘಟಕದ ನೂತನ ಅಧ್ಯಕ್ಷರಾಗಿ ಕನ್ನಡ ಹೋರಾಟಗಾರ ಶ್ರೀ ಎನ್ಆರ್ ಮಂಜುನಾಥ್ ರವರು ಮತ್ತು ಪದಾಧಿಕಾರಿಗಳು ಹೊಣೆಗಾರಿಕೆ ಸ್ವೀಕರಿಸಿದರು, ಶಾಂತಿನಗರದ ಹಾಕಿ ಕ್ರೀಡಾಂಗಣ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಎನ್ ಎ ಹ್ಯಾರಿಸ್ ಅವರ ಸಮ್ಮುಖದಲ್ಲಿ ರಾಜ್ಯಾಧ್ಯಕ್ಷರಾದ ಡಾ ಎಸ್ ಬಾಲಾಜಿ ರವರು ಪದಾಧಿಕಾರಿಗಳಿಗೆ ಹೊಣೆಗಾರಿಕೆ ನೀಡಿದರು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಶಾಸಕರಿ ಎನ್ ಎ ಹ್ಯಾರಿಸ್ ರವರು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡುವುದು ಅತ್ಯಂತ ಜರೂರಾಗಿದೆ ಎಂದು ಒತ್ತಿ ಹೇಳಿದರು, ಇದೇ ಸಂದರ್ಭದಲ್ಲಿ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿ ಶೀಘ್ರದಲ್ಲೇ ಕನ್ನಡ ಭವನ ನಿರ್ಮಿಸುವ ಕುರಿತು ಪ್ರಸ್ತಾಪಿಸಿದರು ಮತ್ತು ತಮ್ಮ ಮತಕ್ಷೇತ್ರದಲ್ಲಿ ರಾಜ್ಯಮಟ್ಟದ ಜಾನಪದ ಸಮ್ಮೇಳನ ನಡೆಸಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು, ಕಜಾಪ ಜಿಲ್ಲಾ ಕಾರ್ಯಾಧ್ಯಕ್ಷ ಡಾ ವೆ ಅಜಿತ್ ಕುಮಾರ್ ಅವರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಜಾನಪದ ಪರಿಷತ್ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿದರು,ಜಾನಪದ ಕಲಾವಿದೆ ಗೌರಮ್ಮ ಮತ್ತು ತಂಡದವರ ಗೀತಾಗಾಯನ ಸೊಗಸಾಗಿ ಮೂಡಿಬಂತು, ಯಕ್ಷಗಾನ ಪ್ರದರ್ಶನ ಕಾರ್ಯಕ್ರಮಕ್ಕೆ ಮೆರುಗು ನೀಡಿತ್ತು, ಶಿಕ್ಷಕ ಸಿ ಎಂ ಗೋವಿಂದಪ್ಪ ಕಾರ್ಯಕ್ರಮ ನಿರೂಪಿಸಿದರು, ನಾಗರಾಜ್ ಅವರು ವಂದನಾರ್ಪಣೆ ಸಲ್ಲಿಸಿದರು.
Post navigation